ನವದೆಹಲಿ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಜನತೆಗೆ ಮೋಸ ಮಾಡುತ್ತಿದೆ. ಮಹಿಳೆಯರಗೆ ಉಚಿತ ಪ್ರಯಾಣ ಅಂತ ಹೇಳಿದ್ರು ಆದರ ಈಗ ಬಸ್ ನಿಲ್ಲಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಹಣ ಜನರಿಗೆ ತಲುಪುತ್ತಿಲ್ಲ. ರಾಜ್ಯದಲ್ಲಿ ಒಂದಲ್ಲ ಒಂದು ದರ ಏರಿಕೆಯಾಗುತ್ತಿದೆ ಎಂದು ಕಿಡಿಕಾರಿದರು.
ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಸರ್ಕಾರದ ಶಿಫಾರಸ್ಸಿನ ಮೇರೆಗೆ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ನಿಮ್ಮ ಒತ್ತಡಕ್ಕೆ ಮಣಿದು ಕೇಂದ್ರ ಅನುಮತಿ ಕೊಟ್ಟಿರುವುದು ಎಂದು ತಿಳಿಸಿದರು.





