Gujarat 8 dead many missing after bridge collapses
ಗುಜರಾತ್: ಇಲ್ಲಿನ ಸೇತುವೆಯೊಂದು ಕುಸಿದುಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಆಡಳಿತ ಧಾವಿಸಿದ್ದು, ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ವಡೋದರಾ ಜಿಲ್ಲೆಯ ಪದ್ರಾದಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್‌ನ್ನು ಸಂಪರ್ಕಿಸುತ್ತದೆ.
ಘಟನೆ ಬಳಿಕ ಹಲವಾರು ವಾಹನಗಳು ನೀರಿನಲ್ಲಿ ಮುಳುಗಿದ್ದು, ಇಲ್ಲಿಯವರೆಗೆ 10ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…