ದೇಶ- ವಿದೇಶ

ಗುಜರಾತ್|‌ ಸೇತುವೆ ಕುಸಿದು 8 ಮಂದಿ ಸಾವು: ಹಲವರು ನಾಪತ್ತೆ

ಗುಜರಾತ್: ಇಲ್ಲಿನ ಸೇತುವೆಯೊಂದು ಕುಸಿದುಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಆಡಳಿತ ಧಾವಿಸಿದ್ದು, ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ವಡೋದರಾ ಜಿಲ್ಲೆಯ ಪದ್ರಾದಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ರಾಜ್ಯ ಹೆದ್ದಾರಿಯ ಉದ್ದಕ್ಕೂ ಮಹಿಸಾಗರ್‌ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಸೇತುವೆ ವಡೋದರಾ ಮತ್ತು ಆನಂದ್‌ನ್ನು ಸಂಪರ್ಕಿಸುತ್ತದೆ.

ಘಟನೆ ಬಳಿಕ ಹಲವಾರು ವಾಹನಗಳು ನೀರಿನಲ್ಲಿ ಮುಳುಗಿದ್ದು, ಇಲ್ಲಿಯವರೆಗೆ 10ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

3 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

3 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

4 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

4 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

4 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

4 hours ago