ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿರುವ ಗೇಮಿಂಗ್ ಝೋನ್‌ನಲ್ಲಿ ಶನಿವಾರ(ಮೇ.25) ಬೆಂಕಿ ಅವಘಡ ಸಂಭವಿಸಿದ್ದು, 24 ಮಂದಿ ಮೃತಪಟ್ಟಿದ್ದಾರೆ.
ಈ ಅಗ್ನಿ ದುರಂತದಲ್ಲಿ 12 ಮಕ್ಕಳು ಸೇರಿದಂತೆ 24 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಸಿಲುಕಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.
ಬೆಂಕಿಯ ಕೆನ್ನಾಲಿಗೆಯಿಂದ ಗೇಮ್ ಝೋನ್ ಸಂಪೂರ್ಣ ಕುಸಿದಿದೆ. ಬೀಸುವ ಗಾಳಿಯಿಂದಾಗಿ ಬೆಂಕಿ ಇನ್ನಷ್ಟು ಜೋರಾಗಿ ಉರಿಯುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೊಗೆಯ ಪ್ರಮಾಣ ಹೆಚ್ಚಾಗಿದ್ದು, ಒಳಗೆ ಸಿಲುಕಿದವರ ಚೀರಾಟ, ಹೊರಗಿದ್ದವರ ಆಕ್ರಂದನ ಮುಗಿಲುಮುಟ್ಟಿದೆ.
ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…
ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…
ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…