ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ.
ಕಳೆದ ಮೂರು ದಿನಗಳಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದ್ದು, ಹತ್ಯೆಗೀಡಾದ ಮೂವರು ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:- ಮೈಸೂರು| ರಾತ್ರೋರಾತ್ರಿ ಶ್ರೀಗಂಧದ ಮರ ಕಳ್ಳತನ
ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.





