ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು ಪ್ರತಿದಾಳಿಯಲ್ಲಿ ಬಂದೂಕುಧಾರಿಯೊಬ್ಬ ಸಾವನ್ನಪ್ಪಿದ್ದಾನೆ.
ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿದ್ದರು. ವ್ಯಕ್ತಿಯೊಬ್ಬ ಶ್ವೇತ ಭವನದ ಬಳಿಯ 17ನೇ ಸ್ಟ್ರೀಟ್ ಮತ್ತು ಪೆನ್ಸಿಲ್ವೇನಿಯಾ ಅವೆನ್ಯೂ ಚೆಕ್‌ಪಾಯಿಂಟ್ ಬಳಿ ಬಂದಿದ್ದಾನೆ. ಬಂದವನೇ ತನ್ನ ಬ್ಯಾಗ್‌ನಿಂದ ಗನ್ ಹೊರತೆಗೆದು ಅಲ್ಲಿ ನಿಯೋಜನೆಗೊಂಡಿದ್ದ ಅಮೆರಿಕ ಸೀಕ್ರೆಟ್ ಸರ್ವೀಸ್ ಅಧಿಕಾರಿಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಅಧಿಕಾರಿಗಳು ಆತನ ಮೇಲೆ ಪ್ರತಿದಾಳಿ ನಡೆಸಿ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಶಂಕಿತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ.
ಗುಂಡಿನ ಚಕಮಕಿಯ ನಡುವೆ ಅಲ್ಲೇ ಸಮೀಪದಲ್ಲಿದ್ದ ಒಬ್ಬ ಸಾರ್ವಜನಿಕ ವ್ಯಕ್ತಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಭದ್ರತಾ ಸಿಬ್ಬಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ಗುಂಡಿನ ಸದ್ದು ಕೇಳಿಸುತ್ತಿದ್ದಂತೆ ಇಡೀ ಶ್ವೇತ ಭವನವನ್ನು ತಕ್ಷಣವೇ ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಯಿತು ಮತ್ತು ಅಲ್ಲಿದ್ದ ಪತ್ರಕರ್ತರನ್ನು ಸುರಕ್ಷಿತ ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ನಂತರ ಭದ್ರತೆಯನ್ನು ಖಚಿತಪಡಿಸಿಕೊಂಡು ಲಾಕ್‌ಡೌನ್ ತೆರವುಗೊಳಿಸಲಾಗಿದೆ.
ಏಪ್ರಿಲ್ 26 ರಂದು ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ವಾರ್ಷಿಕ ವರದಿಗಾರರ ಭೋಜನ ಕೂಟ ನಡೆಯುತ್ತಿದ್ದಾಗ ಬಂದೂಕುಧಾರಿಯೊಬ್ಬ ಶಾಟ್‌ಗನ್‌ನೊಂದಿಗೆ ಭದ್ರತಾ ತಪಾಸಣಾ ಕೇಂದ್ರದೊಳಗೆ ನುಗ್ಗಿ ಗುಂಡು ಹಾರಿಸಿದ್ದನು. ಆತನನ್ನು ಭದ್ರತಾ ಸಿಬ್ಬಂದಿ ತಕ್ಷಣವೇ ಬಂಧಿಸಿದ್ದರು. ಟ್ರಂಪ್ ಅವರು ಡಿನ್ನರ್‌ನಲ್ಲಿ ಭಾಗಿಯಾಗಿದ್ದಾಗಲೇ ಈ ಶೂಟೌಟ್ ನಡೆದಿತ್ತು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…