Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ಗುಂಡಿನ ಚಕಮಕಿ: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರೂ ಹುತಾತ್ಮರಾಗಿದ್ದಾರೆ ಎಂದು ಶನಿವಾರ ಪೋಲಿಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿಯಿಂದ ಉತ್ತರ ಕಾಶ್ಮೀರ ಪಟ್ಟಾನ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆ ನಡೆಸಿದೆ.

ಕಳದೆ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ಟಪ್ಪರ್ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಉಗ್ರರೊಂದಿಗೆ ಭದ್ರತಾ ಸಿಬ್ಬಂದಿ ಎನ್‍ಕೌಂಟರ್ ನಡೆಸಿದರು. ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಇಬ್ಬರು ಯೋಧರು ಹುತಾತ್ಮರಾಗಿ ಮತ್ತಿಬ್ಬರು ಗಾಯಗೊಂಡಿದ್ದರು. ಅದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಇಂದು ಮೂವರು ಉಗ್ರರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Tags: