ನವದೆಹಲಿ: ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ರಾಜೀವ್ ಕುಮಾರ್ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯೂ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ದಾರೆ. ಇಂದು(ಫೆಬ್ರವರಿ.19) 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಜ್ಞಾನೇಶ್ ಕುಮಾರ್ ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಭಾರತದ ಮೊದಲ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕಾರಿಸಿದ್ದು, 2029ರ ಜನವರಿ 26ರವರೆಗೂ ಅಧಿಕಾರದಲ್ಲಿರುತ್ತಾರೆ.





