ದೇಶ- ವಿದೇಶ

ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ಎಚ್.ಡಿ. ದೇವೇಗೌಡ

ವಿಧೇಯಕ ತರುವ ಮೂಲಕ ಮೋದಿ ಅವರು ವಕ್ಫ್ ನ ₹1.2 ಲಕ್ಷ ಕೋಟಿ ಬೆಲೆಯ ಆಸ್ತಿ ರಕ್ಷಣೆ ಮಾಡಿದ್ದಾರೆ

ನಾವು ಜಾತ್ಯತೀತ ಎಂದವರು ಮುಸ್ಲಿಮರಿಗೆ 75 ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ

ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪ್ರತಿಪಾದಿಸಿದರು.

ರಾಜ್ಯಸಭೆಯಲ್ಲಿ ಇಂದು(ಏ.3) ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು, ದೇಶದಲ್ಲಿರುವ ವಕ್ಫ್ ಬೋರ್ಡ್‌ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದರು.

ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ ಹಾಗೂ ಅದರ ಮೌಲ್ಯ ₹1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ನಾವು ಜಾತ್ಯತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ ಎಂದು ಕಿಡಿಕಾರಿದ ಅವರು, ವಕ್ಫ್ ಆಸ್ತಿ ದುರ್ಬಳಕೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಈ ವಿಧೇಯಕವೂ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ, ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲ  ಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ನಮ್ಮ ದೇಶದಲ್ಲಿನ ನಾಗರಿಕರು ದೇವರನ್ನು ನಾನಾ ಹೆಸರುಗಳಲ್ಲಿ, ಬಗೆಯಲ್ಲಿ ಪೂಜಿಸುತ್ತಾರೆ, ಕರೆಯುತ್ತಾರೆ. ಕೆಲವರು ಅಲ್ಹಾ ಎನ್ನುತ್ತಾರೆ, ನಾನು ರಾಮ ಎಂದು ಕರೆಯುತ್ತೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ದೇವರುಗಳ ಬಗ್ಗೆ ಗೌರವ, ನಂಬಿಕೆ ಹೊಂದಿದ್ದೇನೆ. ನಾನು ತಿರುಪತಿ, ಅಮೃತಸರದ ಸ್ವರ್ಣ ಮಂದಿರ, ಅಜ್ಮೀರ್ ದರ್ಗಾಕ್ಕೂ ಹೋಗುತ್ತೇನೆ. ನನ್ನ ನಂಬಿಕೆ ನನ್ನದು. ಇತರರ ನಂಬಿಕೆಯನ್ನು ಗೌರವಿಸುತ್ತೇನೆ. ತುಳಿತಕ್ಕೆ ಒಳಗಾದ ದುರ್ಬಲರ ಪರವಾಗಿ ನಾನು ವಕ್ಫ್ ಮಸೂದೆ ಮತ್ತು ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತೇನೆ ಎಂದು  ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿ ಆಗಿ ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ನಿರ್ಧಾರಗಳನ್ನು ಮಾಡಿದ್ದೇನೆ. ಅವರ ಒಳ್ಳೆಯದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿದ್ದೇನೆ. ಹಾಗಂತ ನಾನು ಯಾವುದೇ ಸಿದ್ಧಾಂತಕ್ಕೆ ಜೋತು ಬಿದ್ದಿಲ್ಲ. ನಾನೊಬ್ಬ ರೈತ. ರೈತರಿಗೂ ಒಳ್ಳೆಯದು ಮಾಡಿದ್ದೇನೆ. ಅಲ್ಲದೆ, ನಾನು ಯಾವುದೇ ಸಿದ್ಧಾಂತದವನಲ್ಲ, ನಾನು ರೈತ. ಮುಸ್ಲಿಂ ಮಾತ್ರವಲ್ಲ ಬಹಳಷ್ಟು ಸಮುದಾಯಕ್ಕೆ ಮೀಸಲಾತಿ ನೀಡಿದ್ದೇನೆ. ಸಣ್ಣಪುಟ್ಟ ಸಮುದಾಯಗಳಿಗೆ ಮೀಸಲು ಸೌಲಭ್ಯ ನೀಡಿ ಅವರ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅನೇಕ ಹೋರಾಟ, ಸಂಘರ್ಷಗಳನ್ನು ಮಾಡಿದ್ದೇನೆ. ಆದರೆ, ಯಾವತ್ತೂ ನಾನು ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿಲ್ಲ. ಮಾಡುವುದೂ ಇಲ್ಲ. ಆದರೆ, ಇಲ್ಲಿ ನಡೆಯುತ್ತಿರುವುದು ನೋಡಿ ಬೇಸರ ಆಗುತ್ತದೆ ಎಂದು ದೇವೇಗೌಡ ಅವರು ಅತೃಪ್ತಿ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

12 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

53 mins ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

2 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

3 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

4 hours ago