ದೇಶ- ವಿದೇಶ

ಕರ್ನಾಟಕದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಒತ್ತಾಯಿಸಿದ ಎಚ್.ಡಿ.ದೇವೇಗೌಡ

ರಾಜ್ಯಕ್ಕೆ ರೈಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ

ರೇಲ್ವೆ ಸಮತೋಲಿತ ಅಭಿವೃದ್ಧಿ ಬಹಳ ಎಂದು ಪ್ರತಿಪಾದನೆ

ಹೊಸದಿಲ್ಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರವನ್ನು ಕೋರಿದರು.

ರಾಜ್ಯಸಭೆಯಲ್ಲಿ ರೈಲ್ವೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಕರ್ನಾಟಕದ ರೈಲ್ವೆ ಯೋಜನೆಗಳ ಅಗತ್ಯವನ್ನು ಒತ್ತಿ ಹೇಳಿದರು.

ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಆದಾಗ್ಯೂ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೇಲ್ವೆ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು ₹800 ಕೋಟಿಯಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಎಂದು ಹೇಳಿದರು.

ನರೇಂದ್ರ ಮೋದಿ ಅವರ ಆಡಳಿತದ ಅಡಿಯಲ್ಲಿ ರಾಜ್ಯದ ಅನೇಕ ರೇಲ್ವೆ ಯೋಜೆಗಳಿಗೆ ಮರು ಚಾಲನೆ ಸಿಕ್ಕಿದೆ. ಆದಾಗ್ಯೂ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಮತ್ತು ಬೆಂಗಳೂರಿನಿಂದ ಭಾರತದ ಇತರೆ ಭಾಗಗಳಿಗೆ ಸಂಪರ್ಕ ಸೇರಿದಂತೆ ಹಲವಾರು ಯೋಜನೆಗಳು ಕಾರ್ಯರೂಪಕ್ಕೆ ಬಾರದೆ ಇನ್ನೂ ಬಾಕಿ ಉಳಿದಿವೆ. ಇವುಗಳ ಕಡೆ ರೇಲ್ವೆ ಸಚಿವರು ತಕ್ಷಣ ಗಮನ ಹರಿಸಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.

ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ರೇಲ್ವೆ ಯೋಜನೆಗಳನ್ನು ಮತ್ತಷ್ಟು ವೇಗಗೊಳಿಸುವಂತೆ ಸರ್ಕಾರವನ್ನು ಪದೇ ಪದೆ ಮನವಿ ಮಾಡಿದ ಅವರು; ರೈಲ್ವೆ ಸಂಪರ್ಕವು ಸಾಮಾನ್ಯ ನಾಗರಿಕರಿಗೆ ಕೈಗೆಟುಕುವ ಪ್ರಯಾಣಕ್ಕೆ ಕಾರಣವಾದ ಕೆಲ ಮಹತ್ವದ ಅಂಶಗಳನ್ನು ಉದಾಹರಣೆ ಸಮೇತವಾಗಿ ಉಲ್ಲೇಖಿಸಿದರು.

ಹಾಸನದಿಂದ ಮೈಸೂರಿಗೆ  ರೈಲಿನಲ್ಲಿ ಪ್ರಯಾಣ ಮಾಡಿದರೆ ಟಿಕೆಟ್ ವೆಚ್ಚ ₹30 ಆಗುತ್ತದೆ. ಆದರೆ ಬಸ್ ದರಗಳು ಬಹುತೇಕ ಎರಡು ಪಟ್ಟು ಮೂರು ಪಟ್ಟು ಹೆಚ್ಚಾಗಿರುತ್ತವೆ. ಇದಕ್ಕಾಗಿಯೇ ರೇಲ್ವೆ ಯೋಜನೆಗಳ ವಿಸ್ತರಣೆ ಪೂರ್ಣ ವೇಗದಲ್ಲಿ ಮುಂದುವರಿಯಬೇಕು ಎಂದು ಅವರು ಪ್ರತಿಪಾದಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ರೇಲ್ವೆ ಕ್ಷೇತ್ರದಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮಾಜಿ ಪ್ರಧಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದರು. ತಮ್ಮ ಅನುಭವದಿಂದ ಹೇಳುತ್ತಿದ್ದೇನೆ, ಕಳೆದ ಎಪ್ಪತ್ತೈದು ವರ್ಷಗಳ ಅಭಿವೃದ್ಧಿಯನ್ನು ಪರಿಶೀಲನೆ ಮಾಡಿ ನೋಡಿದಾಗ ಹತ್ತು ವರ್ಷಗಳ ಅಭಿವೃದ್ಧಿ ಕಣ್ಣಿಗೆ ಕಟ್ಟುವಂತೆ ಕಾಣುತ್ತದೆ ಎಂದು ಅವರು ಹೇಳಿದರು.

ಹಿಂದೆ ಅನುಮೋದನೆ ಪಡೆಯಲು ವರ್ಷಗಳೇ ಹಿಡಿಯುತ್ತಿದ್ದ ರೈಲ್ವೆ ಯೋಜನೆಗಳು ಈಗ ಅಭೂತಪೂರ್ವ ವೇಗದಲ್ಲಿ ಕಾರ್ಯಗತಗೊಳ್ಳುತ್ತಿವೆ ಎಂದ ಅವರು; ತಮ್ಮ ಅಧಿಕಾರಾವಧಿಯಲ್ಲಿ ರೈಲ್ವೆ ಅನುದಾನ ಹಂಚಿಕೆ, ಯೋಜನೆಗಳ ಜಾರಿ ಇತ್ಯಾದಿ ಅಂಶಗಳನ್ನು ನೆನಪು ಮಾಡಿಕೊಂಡರು, ಅಲ್ಲದೆ; ಆಗ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮತ್ತು ನಿಧಾನಗತಿಯ ಯೋಜನಾ ಅನುಷ್ಠಾನ ಪರಿಸ್ಥಿತಿಯನ್ನು ನೆನಪಿಸಿಕೊಂಡರು. ಇದಕ್ಕೆ ವ್ಯತಿರಿಕ್ತವಾಗಿ, ದೇಶಾದ್ಯಂತ ರೈಲ್ವೆ ಅಭಿವೃದ್ಧಿಯನ್ನು ಪರಿವರ್ತಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಸ್ಪಷ್ಟ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿದೆ ಎಂದು ಹೇಳಿದರು.

ರೈಲ್ವೆ ವಿಸ್ತರಣೆ ಮತ್ತು ಸುರಕ್ಷತೆಯಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬಂದಿವೆ ಎಂದು ದೇವೇಗೌಡರು; ಕೆಲ ಅಂಶಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

ಹಿಂದೆ, ಆಧುನಿಕ ಮೂಲಸೌಕರ್ಯಗಳ ಕೊರತೆಯಿಂದಾಗಿ ರೇಲ್ವೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದವು. ಆದರೆ ಇಂದು ಸುರಕ್ಷತಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿವೆ ಎಂದು ಅವರು ಹೇಳಿದರು. ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಯತ್ನಗಳು ಕಾರಣ ಎಂದ ಅವರು, ಸಚಿವರನ್ನು ಅವರನ್ನು “ರಾಷ್ಟ್ರದ ಪ್ರಗತಿಗೆ ಬದ್ಧರಾಗಿರುವ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ನಾಯಕ” ಎಂದು ಬಣ್ಣಿಸಿದರು.

 

ಅಲ್ಲದೆ, ಭಾರತದ ರೇಲ್ವೆ ಬೆಳವಣಿಗೆಯನ್ನು ಚೀನಾ, ರಷ್ಯಾ, ಕೆನಡಾ ಮತ್ತು ಆಸ್ಟ್ರೇಲಿಯಾದೊಂದಿಗೆ ಹೋಲಿಸಿ ವಿವರಿಸಿದರು. ಭಾರತದ ಪ್ರಗತಿ ಈಗ ಜಾಗತಿಕ ಮಾನದಂಡಗಳಿಗೆ ಸಮನಾಗಿದೆ ಎಂದರಲ್ಲದೆ, ರೇಲ್ವೆ ಮಾರ್ಗಗಳ ವಿಸ್ತರಣೆ, ವಿದ್ಯುದೀಕರಣ ಮತ್ತು ಸರಕು ಸಾಗಣೆ ಕಾರಿಡಾರ್‌ಗಳ ಅಭಿವೃದ್ಧಿ ಗಮನಾರ್ಹವಾಗಿ ಆಗಿದೆ ಎಂದರು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವೇಗೌಡರು ರೈಲ್ವೆ ಆಧುನೀಕರಣಕ್ಕೆ ಮೋದಿ ಅವರ ಸರ್ಕಾರವು ತೋರಿದ ಬದ್ಧತೆಗೆ ಅಭಿನಂದನೆ ಸಲ್ಲಿಸಿದ ಅವರು; ಕರ್ನಾಟಕದಲ್ಲಿ ಬಾಕಿ ಇರುವ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ಒತ್ತಿ ಹೇಳಿದರು. ತಮ್ಮ ಸಲಹೆಗಳು ಟೀಕಿಸುವ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ಎಲ್ಲಾ ಪ್ರದೇಶಗಳಲ್ಲಿ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಆಶಯವನ್ನು ಹೊಂದಿವೆ ಎಂದು ಅವರು ಪುನರುಚ್ಚರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

5 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

5 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

5 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

8 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

8 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

8 hours ago