ದೇಶ- ವಿದೇಶ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸುವ ಪ್ರಸ್ತಾಪ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವರೊಂದಿಗೆ ಕೃಷಿ ಸಚಿವರನ್ನು ಭೇಟಿಯಾದ ಮಾಜಿ ಪ್ರಧಾನಿಗಳು ತಮ್ಮ ಪ್ರಸ್ತಾವನೆ ಕುರಿತ ಪತ್ರವನ್ನು ನೀಡಿದರು.

ಮಾಜಿ ಪ್ರಧಾನಿಗಳಾದ ದೇವೇಗೌಡರು ಹುಣಸೆ, ಹಲಸು ಮತ್ತು ನೇರಳೆ ಔಷಧ ಗುಣಗಳುಳ್ಳ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ, ಇವುಗಳನ್ನು ಶತಮಾನಗಳಿಂದ ಭಾರತದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಳು ಸಾವಯವವಾಗಿ ಬೆಳೆಯುತ್ತವೆ, ಪ್ರಕೃತಿಯಲ್ಲಿ ಇವು ಸಶಕ್ತವಾಗಿ ಬೆಳೆಯುತ್ತವೆ. ಕಡಿಮೆ ಮಳೆಯ ಅಗತ್ಯವಿರುತ್ತದೆ ಮತ್ತು ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ ಎಂದು ಅವರು ಕೃಷಿ ಸಚಿವರ ಗಮನಸೆಳೆದರು.

ಹುಣಸೆ ಹಣ್ಣನ್ನು ದೇಶಾದ್ಯಂತ ವ್ಯಾಪಕವಾಗಿ ಬೆಳೆಯಲಾಗುತ್ತದೆ, ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ, ಆದರೆ ಹಲಸು ಮತ್ತು ನೇರಳೆಗಳನ್ನು ಪ್ರಧಾನವಾಗಿ ಭಾರತದ ದಕ್ಷಿಣ, ಮಧ್ಯ, ಪೂರ್ವ ಮತ್ತು ಪೂರ್ವ ರಾಜ್ಯಗಳಲ್ಲಿ ಬೆಳೆಯಲಾಗುತ್ತದೆ. ಭಾರತವು ಈ ಹಣ್ಣುಗಳ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ. ಏಷ್ಯಾದ ಕೆಲ ದೇಶಗಳು ಕಮತ್ತು ಆಫ್ರಿಕನ್ ದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಈ ಕೃಷಿ ಕಂಡುಬರುತ್ತದೆ ಎಂಬ ಅಂಶವನ್ನು ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:-ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ಭಾರತದಲ್ಲಿರುವ ಕೃಷಿ ಪದ್ಧತಿಗಳನ್ನು ಉಲ್ಲೇಖಿಸುತ್ತಾ ವಿವರ ನೀಡಿರುವ ದೇವೇಗೌಡರು; ಸಾಂಪ್ರದಾಯಿಕವಾಗಿ ಈ ಬೆಳೆಗಳನ್ನು ಬೀಜಗಳನ್ನು ನೆಟ್ಟು ಬೆಳೆಯಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಕಸಿ ಮಾಡಿದ ಸಸಿಗಳು ಸಾಮಾನ್ಯವಾಗಿದ್ದು, ಇಳುವರಿ ಮತ್ತು ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಗಮನಿಸಿದರು. ಪ್ರತಿ ವರ್ಷ ದೊಡ್ಡ ಪ್ರಮಾಣದ ಉತ್ಪಾದನೆ ಮತ್ತು ಕೊಯ್ಲು ಮಾಡುತ್ತಿದ್ದರೂ ಹಣ್ಣುಗಳ ಗಮನಾರ್ಹ ಭಾಗವು ಕೊಯ್ಲು ಮಾಡದೆ ಮತ್ತು ಕಡಿಮೆ ಬಳಕೆಯಲ್ಲಿವೆ. ಕೊಯ್ಲು ಮಾಡುವಲ್ಲಿನ ತೊಂದರೆ, ಖರೀದಿದಾರರ ಕೊರತೆ, ಅಸಮರ್ಪಕ ಸಂಸ್ಕರಣಾ ಸೌಲಭ್ಯಗಳು ಮತ್ತು ದೇಶಾದ್ಯಂತ ಬೆಳೆಗಾರರಿಗೆ ಶೀತಲೀಕರಣ ಕೇಂದ್ರಗಳಿಗೆ ಸೀಮಿತ ಪ್ರವೇಶದಂತಹ ಸವಾಲುಗಳು ಇದಕ್ಕೆ ಕಾರಣವೆಂದು ಅವರು ಹೇಳಿದರು.

ಈ ಹಣ್ಣುಗಳು ಮತ್ತು ಅವುಗಳ ಉಪ ಉತ್ಪನ್ನಗಳು ಔಷಧೀಯ ಕೈಗಾರಿಕೆಗಳಿಂದ ಬೇಡಿಕೆ ಸೇರಿದಂತೆ ದೇಶೀಯ ಮತ್ತು ರಫ್ತು ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿವೆ ಎಂದು ಒತ್ತಿ ಹೇಳಿದ ಮಾಜಿ ಪ್ರಧಾನಿಗಳು; ಈ ಬೆಳೆಗಳನ್ನು ಹೆಚ್ಚಿನ ಆದಾಯ ಗಳಿಸುವ, ‘ಡಾಲರ್ ಗಳಿಸುವ’ ಬೆಳೆಗಳೆಂದು ಕೃಷಿ ಸಚಿವರ ಗಮನ ಸೆಳೆದರು. ಅಲ್ಲದೆ, ಇದು ರಾಷ್ಟ್ರೀಯ ಆರ್ಥಿಕತೆಗೆ ಕೊಡುಗೆ ನೀಡುತ್ತದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ದೊಡ್ಡ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.

ಕೋಲಾರ ಸಂಸದ ಮಲ್ಲೇಶ್ ಬಾಬು ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

60 mins ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

1 hour ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

1 hour ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

1 hour ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

1 hour ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

1 hour ago