Mysore
13
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲೂ ಎಚ್.ಡಿ.ಕುಮಾರಸ್ವಾಮಿಗೆ ಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ.

ಸಮಿತಿಯಲ್ಲಿ ಎಚ್‌ಡಿಕೆ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹ ಸಚಿವ ಅಮಿತ್‌ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ವಿದೇಶಾಂಗ ಸಚಿವ ಜೈಶಂಕರ್‌, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ, ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌, ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್‌ ಮತ್ತು ಪಂಚಾಯತ್‌ ರಾಜ್‌ ಮತ್ತು ಮೀನುಗಾರಿಗೆ ಸಚಿವ ರಂಜನ್‌ ಸಿಂಗ್‌ ಅವರು ಸಹ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತಂತೆ ದೇಶದ ಅತ್ಯುನ್ನತ ಮಟ್ಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ 8 ವಿವಿಧ ಸಂಪುಟ ಸಮಿತಿಗಳನ್ನು ಕೇಂದ್ರ ಸರ್ಕಾರ ರಚನೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿಗೆ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲೂ ಸ್ಥಾನ ಸಿಕ್ಕಿದೆ. ಈ ಬಗ್ಗೆ ಖುಷಿ ಹಂಚಿಕೊಂಡ ಕುಮಾರಸ್ವಾಮಿ ಅವರು, ಕೇಂದ್ರ ಸರ್ಕಾರ ಏನೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Tags:
error: Content is protected !!