ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ.
ಸಮಿತಿಯಲ್ಲಿ ಎಚ್‌ಡಿಕೆ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಜೈಶಂಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಮತ್ತು ಮೀನುಗಾರಿಗೆ ಸಚಿವ ರಂಜನ್ ಸಿಂಗ್ ಅವರು ಸಹ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತಂತೆ ದೇಶದ ಅತ್ಯುನ್ನತ ಮಟ್ಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ 8 ವಿವಿಧ ಸಂಪುಟ ಸಮಿತಿಗಳನ್ನು ಕೇಂದ್ರ ಸರ್ಕಾರ ರಚನೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿಗೆ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲೂ ಸ್ಥಾನ ಸಿಕ್ಕಿದೆ. ಈ ಬಗ್ಗೆ ಖುಷಿ ಹಂಚಿಕೊಂಡ ಕುಮಾರಸ್ವಾಮಿ ಅವರು, ಕೇಂದ್ರ ಸರ್ಕಾರ ಏನೇ ಜವಾಬ್ದಾರಿ ಕೊಟ್ಟರೂ ನಾನು ನಿಭಾಯಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20…
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…