ನವದೆಹಲಿ: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಭಾರತದ ತಂಡ ವಿಜೇತರಾಗಿದೆ. ಈ ತಂಡಗಳು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡು ಸನ್ಮಾನಿಸುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಜನವರಿ.21) ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡ ಸಚಿವರು ಖೋ-ಖೋ ಆಟಗಾರರಾದ ಎಂ.ಕೆ.ಗೌತಮ್, ಚೈತ್ರಾ, ಹಾಗೂ ಮತ್ತವರ ಕೋಚ್‌ಗಳಾದ ಸುಮಿತ್ ಭಾಟಿಯಾ ಮತ್ತು
ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಸನ್ಮಾಸಿದ್ದಾರೆ.
ಈ ವೇಳೆ ಶುಭ ಹಾರೈಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋ-ಖೋ ವಿಶ್ವಕಪ್ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು. ಅಲ್ಲದೇ ನೀವಿಬ್ಬರೂ ಕರ್ನಾಟಕದ ಗರಿಮೆಯನ್ನು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದರು.
ಕನ್ನಡ ನೆಲದ ಗ್ರಾಮೀಣ ಆಟಗಾರರಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಜೊತೆಗೆ ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಏರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಹೀಗಾಗಿ ನಿಮ್ಮಿಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸುತ್ತೇನೆ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಆಟಗಾರರಿಗೆ
ಇವರ ಸಾಧನೆ ಸದಾ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಇನ್ನೂ ಗ್ರಾಮೀಣ ಆಟಗಾರರು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯ ಆಗುವಷ್ಟು ಪ್ರೋತ್ಸಾಹ ನೀಡುತ್ತೇವೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಖೋ-ಖೋ ಆಟಗಾರರಾದ ಗೌತಮ್ ಹಾಗೂ ಚೈತ್ರಾ ಅವರು ಮಾತನಾಡಿ, ನಮ್ಮ ಕರ್ನಾಟಕ ರಾಜ್ಯದವರೇ ಆಗಿರುವ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯ ಘಟನೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…