ದೇಶ- ವಿದೇಶ

ಖೋ-ಖೋ ವಿಶ್ವಕಪ್: ಎಂ.ಕೆ.ಗೌತಮ್, ಚೈತ್ರಾ ಅವರನ್ನು ಸನ್ಮಾನಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ನವದೆಹಲಿ: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಭಾರತದ ತಂಡ ವಿಜೇತರಾಗಿದೆ. ಈ ತಂಡಗಳು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡು ಸನ್ಮಾನಿಸುವ ಮೂಲಕ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗೌರವಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಜನವರಿ.21) ತಮ್ಮ ಸಚಿವಾಲಯಕ್ಕೆ ಬರಮಾಡಿಕೊಂಡ ಸಚಿವರು ಖೋ-ಖೋ ಆಟಗಾರರಾದ ಎಂ.ಕೆ.ಗೌತಮ್, ಚೈತ್ರಾ, ಹಾಗೂ ಮತ್ತವರ ಕೋಚ್‌ಗಳಾದ ಸುಮಿತ್ ಭಾಟಿಯಾ ಮತ್ತು
ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಸನ್ಮಾಸಿದ್ದಾರೆ.

ಈ ವೇಳೆ ಶುಭ ಹಾರೈಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋ-ಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು. ಅಲ್ಲದೇ ನೀವಿಬ್ಬರೂ ಕರ್ನಾಟಕದ ಗರಿಮೆಯನ್ನು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದರು.

ಕನ್ನಡ ನೆಲದ ಗ್ರಾಮೀಣ ಆಟಗಾರರಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಜೊತೆಗೆ ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಏರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಹೀಗಾಗಿ ನಿಮ್ಮಿಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸುತ್ತೇನೆ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಆಟಗಾರರಿಗೆ
ಇವರ ಸಾಧನೆ ಸದಾ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಇನ್ನೂ ಗ್ರಾಮೀಣ ಆಟಗಾರರು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯ ಆಗುವಷ್ಟು ಪ್ರೋತ್ಸಾಹ ನೀಡುತ್ತೇವೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಖೋ-ಖೋ ಆಟಗಾರರಾದ ಗೌತಮ್‌ ಹಾಗೂ ಚೈತ್ರಾ ಅವರು ಮಾತನಾಡಿ, ನಮ್ಮ ಕರ್ನಾಟಕ ರಾಜ್ಯದವರೇ ಆಗಿರುವ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯ ಘಟನೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

15 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

20 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

24 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago