Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

7 ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್‌ ಬಂಡುಕೋರರು

ಕೈರೊ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಿದ ಕದನ ವಿರಾಮದನ್ವಯ 7 ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ರೆಡ್ ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ. ಅವರು ಸ್ಥಿತಿಯ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಬಂದಿಲ್ಲ.

ಪ್ಯಾಲೇಸ್ತೀನಿಯ ೧,೯೦೦ ಕೈದಿಗಳ ಪರವಾಗಿ ೨೦ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿತ್ತು. ಅಲ್ಲದೆ, ಬಿಡುಗಡೆಗೊಳಿಸುವ ೨೦ ಒತ್ತೆಯಾಳುಗಳ ಹೆಸರುಗಳನ್ನು ಪ್ರಕಟಿಸಿತ್ತು.

ಇದನ್ನೂ ಓದಿ:-ಕೊನೆಗೂ ಬೋನಿಗೆ ಬಿದ್ದ ಹೆಣ್ಣು ಹುಲಿ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಒತ್ತೆಯಾಳುಗಳನ್ನು ರೆಡ್‌ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲಿನ ಟಿವಿಗಳಲ್ಲಿ ಪ್ರಸಾರಗೊಳ್ಳುತ್ತಿದ್ದಂತೆಯೇ, ಕುಟುಂಬಸ್ಥರು ಸ್ನೇಹಿತರು ಕಣ್ಣೀರಾದರು. ನಾಗರಿಕರು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಒತ್ತೆಯಾಳುಗಳ ಹಸ್ತಾಂತರ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಅಳವಡಿಸಲಾಗಿದ್ದ ಪರದೆಯಲ್ಲಿ ಸಾವಿರಾರು ಇಸ್ರೇಲಿಗರು ವೀಕ್ಷಿಸಿದರು.

Tags:
error: Content is protected !!