Mysore
26
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಮೂವರು ಶಂಕಿತ ಬೇಟೆಗಾರರ ಕುಟುಂಬಗಳಿಗೆ ಈ ಪರಿಹಾರ ನೀಡಲಾಗುತ್ತದೆ.

ತಮಿಳುನಾಡು ಸರ್ಕಾರ ಮಂಗಳವಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಈ ಕುರಿತು ಅರಣ್ಯ ಸಚಿವ ಆರ್.ವಿ. ರಂಜಿತ್‌ಕುಮಾರ್ ಅವರು ಇಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

Tags:
error: Content is protected !!