Mysore
20
overcast clouds
Light
Dark

ಮಳೆ ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌: ಇಡೀ ಪೊಲೀಸ್‌ ಚೌಕಿಯೇ ಅಮಾನತುಗೊಳಿಸಿದ ಯೋಗಿ ಸರ್ಕಾರ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಜಲಾವೃತಗೊಂಡ ನಡುರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಪುರುಷ ಮತ್ತು ಯುವತಿಗೆ ಎರಡು ದಿನಗಳ ಹಿಂದೆಯಷ್ಟೇ ಯುಕವರ ಗುಂಪೊಂದು ಮಳೆ ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಘಟನಾ ಸ್ಥಳ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸಿ ಆದೇಶಿಸಿದ್ಧಾರೆ.

ಈ ಘಟನೆ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಬುಲೆಟ್‌ ರೈಲು ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದ್ದ, ಅವರನ್ನು ಪವನ್‌ ಯಾದವ್‌ ಮತ್ತು ಮೊಹಮ್ಮದ್‌ ಅರ್ಬಾಜ್‌ ಎಂದು ಗುರುತಿಸಲಾಗಿದೆ. ಇವರಾ ನಿಮ್ಮ ಸದ್ಭಾವನೆಯ ವ್ಯಕ್ತಿಗಳು? ಇವರಿಗೆ ಸದ್ಭಾವನೆ ರೈಲು ಓಡಿಸಬೇಕೆ? ಚಿಂತಿಸಬೇಡಿ ಇಂತವರಿಗೆ ಇನ್ನು ಮುಂದೆ ಬುಲೆಟ್‌ ರೈಲು ಓಡಿಸಲಾಗುವುದು ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವವರನ್ನು ಬಿಡುವುದಿಲ್ಲ ಎಂದು ಹೇಳಿದ ಸಿಎಂ ಯೋಗಿ, ಮಹಿಳೆಯರ ರಕ್ಷಣೆಯಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಮಹಿಳೆಯರ ಸುರಕ್ಷತೆಯು ನಮಗೆ ಪ್ರಮುಖ ಆದ್ಯತೆಯಾಗಿದೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪ್ರತಿಯೊಬ್ಬ ಸಹೋದರಿ ಮತ್ತು ಮಗಳಿಗೆ ಭರವಸೆ ನೀಡಿದ್ದೇವೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪರಿಣಾಮ ಇಡೀ ಚೌಕಿಯನ್ನು ಅಮಾನತುಗೊಳಿಸಲಾಗಿದೆ, ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ, ಎಎಸ್ಪಿ, ಡಿಸಿಪಿ, ಎಲ್ಲರನ್ನೂ ತೆಗೆದುಹಾಕಲಾಗಿದೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

 ಘಟನೆ ಹಿನ್ನೆಲೆ;

ಉತ್ತರ ಪ್ರದೇಶದ ಲಕ್ನೋದ ತಾಜ್ ಹೋಟೆಲ್ ಸೇತುವೆಯ ಬಳಿ ಜಲಾವೃತಗೊಂಡ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಪುಂಡರ ಗುಂಪೊಂದು ಮಳೆ ನೀರನ್ನು ಎರಚಿ ಕಿರುಕುಳ ನೀಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಘಟನೆ ವಿರುದ್ದ ನೆಟ್ಟಿಗರು ಕಿಡಿಕಾರಿದ್ದರು.

ಆ ಇಬ್ಬರ ಮೈ ಪೂರ್ತಿ ಒದ್ದೆಯಾಗಿ ಅವರು ತಮ್ಮನ್ನು ಬಿಡುವಂತೆ ಮನವಿ ಮಾಡಿದರೂ ಬಿಡದೆ ಪುಂಡರು ಕಿಚಾಯಿಸಿದ್ದಾರೆ. ಇನ್ನೂ ವಿಪರ್ಯಾಸವೆಂದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಬೈಕ್​ನಲ್ಲಿ ಬಂದ ಇಬ್ಬರ ಮೇಲೆ ಮಳೆ ನೀರು ಎರಚಿದ ಪುರುಷರು ಆ ಬೈಕ್ ಅನ್ನು ಹಿಂಬದಿಯಿಂದ ಎಳೆಯಲು ಆರಂಭಿಸಿದರು. ಇದರಿಂದ ಆ ವ್ಯಕ್ತಿ ಬೈಕ್ ನಿಲ್ಲಿಸಿ ಕೀ ತೆಗೆಯುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ಹಿಂದೆ ಕುಳಿತಿದ್ದ ಯುವತಿ ನೀರಿಗೆ ಬಿದ್ದಿದ್ದಾಳೆ