ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿನೇಶ್ ಫೋಗಟ್ ಅವರು ಜೂಲಾನಾ ಕ್ಷೇತ್ರದಿಂದ ಹಾಗೂ ಬಜರಂಗ್ ಪುನಿಯಾ ಅವರು ಬದ್ಲಿ ಕ್ಷೇತ್ರದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಈ ಇಬ್ಬರೂ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಈವರೆಗೆ ಈ ಬಗ್ಗೆ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ.