ದೇಶ- ವಿದೇಶ

ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನ ಸತ್ತು ಬದುಕುತ್ತಿದ್ದರೆ. ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು ಎಂದು ಪ್ರಶ್ನಿಸಿದ ಅವರು, ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಾವ ಪುರುಷಾರ್ಥಕ್ಕೆ ಗ್ರೇಟರ್‌ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ್ಯಾಂಡ್‌ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ?! ಎರಡು ವರ್ಷಗಳಿಂದ ಬ್ರ್ಯಾಂಡ್‌.. ಬ್ರ್ಯಾಂಡ್‌.. ಎಂದು ಭಜನೆ ಮಾಡುತ್ತಿದ್ದೀರಲ್ಲ.. ಬ್ರ್ಯಾಂಡ್‌ ಎಂದರೆ ಬೆಂಗಳೂರನ್ನು ಮುಳುಗಿಸುವುದಾ? ಎಂದು ಪ್ರಶ್ನಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

10 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

17 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

17 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

17 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

17 hours ago