ಹೊಸದಿಲ್ಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಇಂದು ( ಜುಲೈ 9 ) ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸುವುದರ ಬಗ್ಗೆ ಹಾಗೂ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಫೋಟೊ ಹಂಚಿಕೊಂಡಿರುವ ಕುಮಾರಸ್ವಾಮಿ ರಾಜ್ಯದಲ್ಲಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸುವುದು, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು ಹಾಗೂ ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು – ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ತ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ ಚರ್ಚಿಸಲಾಯಿತು. ಅವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಬರೆದುಕೊಂಡಿದ್ದಾರೆ.





