ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಶೇ.50%ರಷ್ಟು ಸರ್ಕಾರಿ ಉದ್ಯೋಗಿಗಳಿಗೆ ಎಎಪಿ ಸರ್ಕಾರ ವರ್ಕ್ ಫ್ರಮ್ ಹೋಮ್ ಮಾಡುವಂತೆ ಆದೇಶ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ದೆಹಲಿಯ ಶೇ.50% ಸರ್ಕಾರಿ ನೌಕರರು ಮನೆಯಿಂದಲೇ ತಮ್ಮ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಈ ನಿಯಮಾವಳಿಯನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಈ ಕಾರಣಕ್ಕೆ ದೆಹಲಿ ಸರ್ಕಾರವೂ ಸರ್ಕಾರಿ ಕಚೇರಿ ನೌಕರರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ಆದೇಶಿಸಲಾಗಿದೆ.