ಶೇ.50%ರಷ್ಟು ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಮಾಡುವಂತೆ ಆದೇಶ ನೀಡಿದ ಎಎಪಿ ಸರ್ಕಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಶೇ.50%ರಷ್ಟು ಸರ್ಕಾರಿ ಉದ್ಯೋಗಿಗಳಿಗೆ ಎಎಪಿ ಸರ್ಕಾರ ವರ್ಕ್‌ ಫ್ರಮ್‌ ಹೋಮ್‌ ಮಾಡುವಂತೆ ಆದೇಶ ನೀಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪರಿಸರ ಸಚಿವ ಗೋಪಾಲ್‌ ರೈ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ದೆಹಲಿಯ ಶೇ.50% ಸರ್ಕಾರಿ ನೌಕರರು ಮನೆಯಿಂದಲೇ ತಮ್ಮ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಈ ನಿಯಮಾವಳಿಯನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಈ ಕಾರಣಕ್ಕೆ ದೆಹಲಿ ಸರ್ಕಾರವೂ ಸರ್ಕಾರಿ ಕಚೇರಿ ನೌಕರರಿಗೆ ವರ್ಕ್‌ ಫ್ರಮ್‌ ಹೋಮ್‌ ಮಾಡಲು ಆದೇಶಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

50 mins ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

1 hour ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

2 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

2 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

3 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

9 hours ago