ಹೊಸದಿಲ್ಲಿ : ಮುಂದಿನ ಮೂರು ಗಂಟೆಗಳ ಕಾಲ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಧಾರಾಕಾರ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.




