ದೇಶ- ವಿದೇಶ

ಡೆಹ್ರಾಡೂನ್‌ನಲ್ಲಿ ಭಾರಿ ಮಳೆ : 17 ಸಾವು, ಹಲವರು ನಾಪತ್ತೆ

ಡೆಹ್ರಾಡೂನ್ : ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆಯ ಪ್ರವಾಹದಿಂದ ವಿನಾಶವುಂಟಾಗಿದೆ. ಉಕ್ಕಿ ಹರಿಯುವ ನದಿತೊರೆಗಳು, ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ನಿರಂತರ ಮಳೆಗೆ ಇದುವರೆಗೆ ೧೮ ಮಂದಿ ಮೃತಪಟ್ಟು, ೨೦ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸುಮಾರು ೯೦೦ ಜನರನ್ನು ರಕ್ಷಿಸಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಯುಎಸ್‌ಡಿಎಂಎ) ವರದಿಯ ಪ್ರಕಾರ, ಡೆಹ್ರಾಡೂನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ೧೮ ಜನರು ಪ್ರಾಣ ಕಳೆದುಕೊಂಡಿದ್ದಾರೆ. ನೈನಿತಾಲ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ತಲಾ ಒಂದು ಸಾವು ದಾಖಲಾಗಿದೆ.

ಡೆಹ್ರಾಡೂನ್‌ನ ವಿಕಾಸನಗರದಲ್ಲಿ ಟನ್ಸ್ ನದಿಯ ಉಕ್ಕಿ ಹರಿಯುತ್ತಿದ್ದು, ನದಿ ದಾಟುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಯೊಂದು ಪ್ರವಾಹದ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ದುರಂತದಲ್ಲಿ ಮೊರಾದಾಬಾದ್ ಜಿಲ್ಲೆಯ ಮುಧಿಯಾ ಜೈನ್ ಗ್ರಾಮದ ಆರು ಜನರು ಸಾವನ್ನಪ್ಪಿದ್ದಾರೆ.

ಸಹಸ್ರಧಾರ ಮತ್ತು ಮಾಲ್ದೇವ್ತಾ ಪ್ರದೇಶಗಳು ಹೆಚ್ಚು ಹಾನಿಗೀಡಾಗಿವೆ. ರಿಸ್ಪಾನಾ ಮತ್ತು ಬಿಂದಾಲ್ ನಂತಹ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವಾರು ಪ್ರದೇಶಗಳು ಪ್ರವಾಹಕ್ಕೆ ಮುಳುಗಿವೆ. ಮನೆಗಳು, ಅಂಗಡಿ ಮತ್ತು ಹೊಟೇಲ್‌ಗಳು ಸಹ ಉಕ್ಕಿ ಹರಿಯುತ್ತಿರುವ ನೀರಿನಿಂದ ಕೊಚ್ಚಿ ಹೋಗಿವೆ.

ಸಹಸ್ರಧಾರಾದ ಕಾರ್ಲಿಗಾಡ್ ಪ್ರದೇಶದಲ್ಲಿ, ನೀರಿನಲ್ಲಿ ಮಣ್ಣು ಕೊಚ್ಚಿ ಹೋಗಿ ೮ ಅಂಗಡಿಗಳು ಮತ್ತು ಹೋಟೆಲ್ ಕೊಚ್ಚಿಹಾಕಿ, ಇಬ್ಬರು ಕಾಣೆಯಾಗಿದ್ದಾರೆ. ಡಿಐಟಿ ಕಾಲೇಜು ಬಳಿಯ ಗ್ರೀನ್ ವ್ಯಾಲಿ ಪಿಜಿಯಲ್ಲಿ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಅವರ ಶವವನ್ನು ಎಸ್‌ಡಿಆರ್‌ಎಫ್ ಹೊರತೆಗೆದಿದೆ.

ಮಸ್ಸೂರಿಯ ಝರಿಪಾನಿ ಟೋಲ್ ಪ್ಲಾಜಾದಲ್ಲಿ ಭೂಕುಸಿತದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಕಲ್ಸಿ-ಚಕ್ರತ ಮೋಟಾರ್ ರಸ್ತೆಯಲ್ಲಿ ಕಲ್ಲು ಬಿದ್ದು ಮತ್ತೊಬ್ಬ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

29 mins ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

3 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

3 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

4 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

4 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

4 hours ago