ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿರುವ ಜನರು ಪ್ರವಾಹದ ಭೀತಿಗೆ ಒಳಗಾಗಿದ್ದು, ತೀವ್ರ ಪರದಾಟ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ರೇಖಾ ಗುಪ್ತಾ ಅವರು, ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಹೇಳಿದರು. ಭಾರೀ ಮಳೆಯಿಂದ ಯಮುನಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ನದಿ ತೀರದಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ಇನ್ನು ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





