Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ದೆಹಲಿಯಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ಕಳೆದ ಶುಕ್ರವಾದ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಜಲಾವೃತವಾದ ಅಂಡರ್‌ಪಾಸ್‌ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಇಂದು ಮಧ್ಯಾಹ್ನದ ವೇಳೆಗೆ ಸಿರಸ್‌ಪುರ ಅಂಡರ್‌ಪಾಸ್‌ ಬಳಿ 12 ವರ್ಷದ ಬಾಲಕ ನೀರಿನಲ್ಲಿ ಮುಳುಗಿದ ಬಗ್ಗೆ ಕರೆ ಬಂದಿತ್ತು. ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದರು. ಅಗ್ನಿಶಾಮಕ ದಳವು ತನ್ನ ರಕ್ಷಣಾ ವಾಹನಗಳನ್ನು ರವಾನಿಸಿತು ಎಂದು ಉಪ ಪೊಲೀಸ್‌ ಆಯುಕ್ತ ಆರ್‌ಕೆ ಸಿಂಗ್‌ ಮಾಹಿತಿ ನೀಡಿದ್ದಾರೆ.

ಮೆಟ್ರೋ ಬಳಿಯ ಅಂಡರ್‌ಪಾಸ್‌ನಲ್ಲಿ ಸುಮಾರು 3 ಅಡಿಗಿಂತಲೂ ಹೆಚ್ಚು ನೀರಿನಿಂದ ತುಂಬಿರುವುದು ಕಂಡು ಬಂದಿತ್ತು. ಅಗ್ನಿಶಾಮಕ ದಳವು ಶೋಧ ಕಾರ್ಯಾಚರಣೆಯನ್ನು ನಡೆಸಿ ಇಬ್ಬರು ಬಾಲಕರ ಶವವನ್ನು ಹೊರತೆಗೆದಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇಬ್ಬರು ಬಾಲಕರನ್ನು ತಕ್ಷಣವೇ ಬಾಬು ಜಗಜೀವನ್‌ ರಾಮ್‌ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಡಿಎಫ್‌ಎಸ್‌ ನಿರ್ದೇಶಕ ಅತುಲ್‌ ಗಾರ್ಗ್‌ ತಿಳಿಸಿದ್ದಾರೆ.

ಪ್ರಾಥಮಿಕ ವಿಚಾರಣೆಯ ಪ್ರಕಾರ ಬಾಲಕರು ಈಜಾಡುವ ಸಲುವಾಗಿ ನೀರಿಗೆ ಇಳಿದಿದ್ದಾಗ ಈ ಘಟನೆ ಸಂಭವಿಸಿದೆ. ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 174ರ ಅಡಿಯಲ್ಲಿ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದಾರೆ. ಈ ಇಬ್ಬರು ಮಕ್ಕಳನ್ನು ಹೊರತುಪಡಿಸಿ, ಆಗ್ನೇಯ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ 60 ವರ್ಷದ ವ್ಯಕ್ತಿಯೊಬ್ಬರು ನೀರಿನಿಂದ ತುಂಬಿರುವ ಅಂಡರ್‌ಪಾಸ್‌ನಲ್ಲಿ ಬಿದ್ದು ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

 

Tags: