ನವದೆಹಲಿ: ಕಳೆದ ಶುಕ್ರವಾದ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಜಲಾವೃತವಾದ ಅಂಡರ್‌ಪಾಸ್‌ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಇಂದು ಮಧ್ಯಾಹ್ನದ ವೇಳೆಗೆ ಸಿರಸ್‌ಪುರ ಅಂಡರ್‌ಪಾಸ್ ಬಳಿ 12 ವರ್ಷದ ಬಾಲಕ ನೀರಿನಲ್ಲಿ ಮುಳುಗಿದ ಬಗ್ಗೆ ಕರೆ ಬಂದಿತ್ತು. ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದರು. ಅಗ್ನಿಶಾಮಕ ದಳವು ತನ್ನ ರಕ್ಷಣಾ ವಾಹನಗಳನ್ನು ರವಾನಿಸಿತು ಎಂದು ಉಪ ಪೊಲೀಸ್ ಆಯುಕ್ತ ಆರ್‌ಕೆ ಸಿಂಗ್ ಮಾಹಿತಿ ನೀಡಿದ್ದಾರೆ.
ಮೆಟ್ರೋ ಬಳಿಯ ಅಂಡರ್‌ಪಾಸ್‌ನಲ್ಲಿ ಸುಮಾರು 3 ಅಡಿಗಿಂತಲೂ ಹೆಚ್ಚು ನೀರಿನಿಂದ ತುಂಬಿರುವುದು ಕಂಡು ಬಂದಿತ್ತು. ಅಗ್ನಿಶಾಮಕ ದಳವು ಶೋಧ ಕಾರ್ಯಾಚರಣೆಯನ್ನು ನಡೆಸಿ ಇಬ್ಬರು ಬಾಲಕರ ಶವವನ್ನು ಹೊರತೆಗೆದಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.
ಇಬ್ಬರು ಬಾಲಕರನ್ನು ತಕ್ಷಣವೇ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಡಿಎಫ್‌ಎಸ್ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯ ಪ್ರಕಾರ ಬಾಲಕರು ಈಜಾಡುವ ಸಲುವಾಗಿ ನೀರಿಗೆ ಇಳಿದಿದ್ದಾಗ ಈ ಘಟನೆ ಸಂಭವಿಸಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 174ರ ಅಡಿಯಲ್ಲಿ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದಾರೆ. ಈ ಇಬ್ಬರು ಮಕ್ಕಳನ್ನು ಹೊರತುಪಡಿಸಿ, ಆಗ್ನೇಯ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ 60 ವರ್ಷದ ವ್ಯಕ್ತಿಯೊಬ್ಬರು ನೀರಿನಿಂದ ತುಂಬಿರುವ ಅಂಡರ್‌ಪಾಸ್‌ನಲ್ಲಿ ಬಿದ್ದು ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…