ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ 88 ವರ್ಷದ ದಾಖಲೆ ಮಳೆಗೆ ಜನ ತತ್ತರಿಸಿದ್ದು, ಭಾರೀ ಮಳೆಗೆ ಆರು ಮಂದಿ ಮೃತಪಟ್ಟಿದ್ದಾರೆ.
ಜುಲೈ.1ರವರೆಗೆ ದೆಹಲಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆಯಲ್ಲಿ ಭಾರೀ ಆತಂಕ ಮನೆ ಮಾಡಿದೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆಯಿಂದ ಬಸವಳಿದಿರುವ ದೆಹಲಿ ಜನತೆ, ಭಾರೀ ಮಳೆಗೆ ತತ್ತರಿಸಿ ಹೋಗಿದ್ದಾರೆ.
ಭಾರೀ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಕತ್ತಲಲ್ಲೇ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಬಾಲಕರು ಮಳೆ ನೀರು ತುಂಬಿದ ಹಳ್ಳದಲ್ಲಿ ಆಟವಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮತ್ತೊಂದು ಘಟನೆಯಲ್ಲಿ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಪ್ರವಾಹಕ್ಕೆ ಒಳಗಾದ ಅಂಡರ್‌ಪಾಸ್‌ನಲ್ಲಿ ವ್ಯಕ್ತಿಯೊಬ್ಬ ಮುಳುಗಿ ಸಾವನ್ನಪ್ಪಿದ್ದಾನೆ. ವಸಂತ ವುಹಾರ್‌ನಲ್ಲಿ ಕುಸಿದ ನಿರ್ಮಾಣ ಹಂತದ ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಪೈಕಿ ಒಬ್ಬನ ಮೃತದೇಹ ಪತ್ತೆಯಾಗಿದೆ.
ಭಾರೀ ಮಳೆಯಿಂದಾಗಿ ಹಲವೆಡೆ ಬೃಹತ್ ಮರಗಳು ಧರೆಗುರುಳಿದ್ದು, ಜನವಸತಿ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಆಸ್ತಿ ಮತ್ತು ಕಾರುಗಳಿಗೆ ಹಾನಿಯಾಗಿದೆ. ಅನೇಕ ವಸತಿ ಪ್ರದೇಶದಲ್ಲಿ ಸ್ಥಳೀಯರು ತಮ್ಮ ಮನೆಗಳನ್ನು ಬಿಡಲು ಸೊಂಟದ ಆಳದ ನೀರಿನ ಮೂಲಕ ಪರದಾಡುವಂತಾಗಿದೆ.
88 ವರ್ಷಗಳಲ್ಲಿ ಜೂನ್‌ನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನದಲ್ಲಿ ಅತ್ಯಧಿಕ ಮಳೆ ಸುರಿದಿದ್ದು, ಮಳೆಯಿಂದ ಇಡೀ ನಗರ ಸ್ತಬ್ಧಗೊಂಡಿದೆ. ಇನ್ನೂ ದೆಹಲಿಯ ಕೆಲವು ಭಾಗಗಳಲ್ಲಿ ಜುಲೈ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…