ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಜಮ್ಮುವಿನಲ್ಲಿ 380 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
ಮಂಗಳವಾರ ಜಮ್ಮುವಿನ ಭಗವತಿ ನಗರದಲ್ಲಿರುವ ನಾಲ್ಕನೇ ತಾವಿ ಸೇತುವೆಯ ಒಂದು ಭಾಗ ಕುಸಿದಿದೆ. ಹಲವಾರು ವಾಹನಗಳು ನದಿಗೆ ಬಿದ್ದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.





