ದೇಶ- ವಿದೇಶ

ಮಹಾಮಳೆಗೆ ಮುಳುಗಿದ ವಾಣಿಜ್ಯ ನಗರಿ ಮುಂಬೈ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಸಂಪೂರ್ಣ ಮುಳುಗಿ ಹೋಗಿವೆ. ಮುಂಬೈನ ಲೋಕಲ್‌ ಟ್ರೈನ್‌ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಮಹಾಮಳೆಗೆ ವಾಣಿಜ್ಯ ನಗರಿ ಮುಂಬೈ ಮುಳುಗಿದ್ದು, ವರ್ಲಿ, ಥಾಣೆ ಸೇರಿದಂತೆ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ ಹಾಕಲಾಗಿದೆ. ಭಾರೀ ಮಳೆಯಿಂದ ಬೈಕ್‌ಗಳು ನೀರಿನಲ್ಲಿ ಕೊಚ್ಚಿಹೋಗಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಮುಂಬೈನ ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಆರು ಗಂಟೆಗಳಲ್ಲಿ ಮಹಾನಗರಿ ಮುಂಬೈನಲ್ಲಿ ದಾಖಲೆ ಮಳೆಯಾಗಿದೆ ಎಂದು ತಿಳಿದುಬಂದಿದೆ. ಆರು ಗಂಟೆಗಳಲ್ಲಿ ೩೦೦ ಮಿ.ಮೀಗಿಂತಲೂ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಬೈ ನಗರದಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಗತ್ಯವಿದ್ದರಷ್ಟೇ ಜನರು ಮನೆಯಿಂದ ಹೊರಬರಬೇಕು. ಇಲ್ಲದಿದ್ದರೆ ಮಕ್ಕಳನ್ನು ಹೊರಗೆ ಕಳುಹಿಸಬೇಡಿ ಎಂದು ಸೂಚನೆ ನೀಡಿದ್ದು, ಮಹಾಮಳೆಯಿಂದ ಜನರು ಹೈರಾಣಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

15 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

15 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

15 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

16 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

16 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

22 hours ago