ಮುಂಬೈ: ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮುಂಬೈ ನಗರದಲ್ಲಿ ಶನಿವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ.
ತುರ್ತು ಸಂದರ್ಭಗಳಲ್ಲಿ ನಿವಾಸಿಗಳು ತಮ್ಮ ವಿಪತ್ತು ನಿಯಂತ್ರಣ ಸಹಾಯವಾಣಿ 1916ನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.





