Mysore
29
overcast clouds

Social Media

ಬುಧವಾರ, 24 ಜೂನ್ 2026
Light
Dark

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹಲವೆಡೆ ಮರಗಳು ಉರುಳಿಬಿದ್ದಿದ್ದು, ಕೆಲವು ಪ್ರದೇಶಗಳಲ್ಲಿ ಗೋಡೆ ಕುಸಿತದ ಘಟನೆಗಳು ಕೂಡ ವರದಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದ್ದು, ಮುಂದಿನ 48 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಇನ್ನು ಭಾರೀ ಮಳೆಯಿಂದ ರೈಲು ಸಂಚಾರಕ್ಕೂ ಹೊಡೆದ ಬಿದ್ದಿದೆ. ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ನಗರದಲ್ಲಿ ನಾಗರಿಕ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿವೆ.

 

Tags:
error: Content is protected !!