Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನೇಪಾಳದಲ್ಲಿ ಧಾರಾಕಾರ ಮಳೆ: ಸಾವಿನ ಸಂಖ್ಯೆ 112ಕ್ಕೆ ಏರಿಕೆ

ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ.

ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈಗಾಗಲೇ 112 ಜನರು ಮೃತಪಟ್ಟಿದ್ದಾರೆ ಎಂಬುದನ್ನು ಅಲ್ಲಿಯ ರಕ್ಷಣಾ ಕಾರ್ಯಚರಣೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೇಶದ ಕೆಲವು ಭಾಗಗಳು ಜಲಾವೃತಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ನಿರಂತರ ಮಳೆಯಿಂದ ಇಲ್ಲಿಯವರೆಗೂ 112 ಜನ ಮರಣ ಹೊಂದಿದ್ದು, ಇವರಲ್ಲಿ 34 ಜನ ರಾಜಧಾನಿ ಕಠ್ಮಂಡು ಕಣಿವೆಯಲ್ಲಿಯೇ ಸಾವಿಗೀಡಾಗಿದ್ದಾರೆ. 36 ಜನ ಅಪಘಾತದಿಂದ ಗಾಯಗೊಂಡಿದ್ದಾರೆ ಎಂದು ನೇಪಾಳ ಪೊಲೀಸ್ ಉಪ ವಕ್ತಾರ ಬಿಷ್ಟೋ ಅಧಿಕಾರಿ ಮಾಹಿತಿ ನೀಡಿದ್ದಾರೆ.‌

ನೇಪಾಳದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್‌ ಮಾಡಲಾಗಿದೆ. ಕಠ್ಮಂಡುವಿನಲ್ಲಿ ಮಳೆಯಿಂದ 226 ಮನೆಗಳು ಮುಳುಗಡೆಯಾಗಿವೆ. ಅಲ್ಲದೇ ಪ್ರವಾಹದಲ್ಲಿ 44 ಮಂದಿ ನಾಪತ್ತೆಯಾಗಿದ್ದು, ಸಾವಿರಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸುಮಾರು ಸುಮಾರು 3,000 ಮಂದಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

Tags: