ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ.
ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈಗಾಗಲೇ 112 ಜನರು ಮೃತಪಟ್ಟಿದ್ದಾರೆ ಎಂಬುದನ್ನು ಅಲ್ಲಿಯ ರಕ್ಷಣಾ ಕಾರ್ಯಚರಣೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೇಶದ ಕೆಲವು ಭಾಗಗಳು ಜಲಾವೃತಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.
ನಿರಂತರ ಮಳೆಯಿಂದ ಇಲ್ಲಿಯವರೆಗೂ 112 ಜನ ಮರಣ ಹೊಂದಿದ್ದು, ಇವರಲ್ಲಿ 34 ಜನ ರಾಜಧಾನಿ ಕಠ್ಮಂಡು ಕಣಿವೆಯಲ್ಲಿಯೇ ಸಾವಿಗೀಡಾಗಿದ್ದಾರೆ. 36 ಜನ ಅಪಘಾತದಿಂದ ಗಾಯಗೊಂಡಿದ್ದಾರೆ ಎಂದು ನೇಪಾಳ ಪೊಲೀಸ್ ಉಪ ವಕ್ತಾರ ಬಿಷ್ಟೋ ಅಧಿಕಾರಿ ಮಾಹಿತಿ ನೀಡಿದ್ದಾರೆ.
ನೇಪಾಳದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ. ಕಠ್ಮಂಡುವಿನಲ್ಲಿ ಮಳೆಯಿಂದ 226 ಮನೆಗಳು ಮುಳುಗಡೆಯಾಗಿವೆ. ಅಲ್ಲದೇ ಪ್ರವಾಹದಲ್ಲಿ 44 ಮಂದಿ ನಾಪತ್ತೆಯಾಗಿದ್ದು, ಸಾವಿರಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸುಮಾರು ಸುಮಾರು 3,000 ಮಂದಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…