Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ದಕ್ಷಿಣ ಭಾರತದಲ್ಲಿ ಅಧಿಕ ಮುಂಗಾರು ಮಳೆ: ದೇಶದಲ್ಲಿ ಮಳೆ ಕೊರತೆ ಎಷ್ಟಿದೆ ಗೊತ್ತಾ.?

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ.

ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು ಮಾತ್ರವೇ ಮಳೆ ಸುರಿದಿದೆ. ಅಂದರೆ ಒಟ್ಟಾರೆ ಮಳೆ ಕೊರತೆ ಪ್ರಮಾಣ ಶೇ.11ರಷ್ಟಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂನ್‌ ಮಾಹೆಯಲ್ಲಿ ಇಷ್ಟು ಕಡಿಮೆ ಮಳೆ ಆಗಿದ್ದು 5 ವರ್ಷದ ಗರಿಷ್ಠ. ಆದರೆ ಖುಷಿಯ ಸಂಗತಿ ಎಂದರೆ ದಕ್ಷಿಣ ಭಾರತದಲ್ಲಿ ಮಾತ್ರ ಶೇ.14ರಷ್ಟು ಹೆಚ್ಚಿನ ಮಳೆ ಸುರಿದಿದೆ. ಉಳಿದೆಡೆ ಮಳೆ ಕೊರತೆ ಉಂಟಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಈ ತಿಂಗಳಿನಲ್ಲಿ ಅಂದರೆ ಜುಲೈನಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಿನಲ್ಲಿ ಸುರಿಯಲಿರುವ ಭಾರೀ ಮಳೆಯಿಂದ ರಾಜ್ಯದ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿದ್ದು, ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಮಳೆ ರೈತರಿಗೆ ಭಾರೀ ಖುಷಿ ತಂದಿದ್ದು, ಹೆಚ್ಚಿನ ಬೆಳೆ ಬೆಳೆಯಲ್ಲಿ ಅನ್ನದಾತರು ಅಂದಾಜು ಹಾಕುತ್ತಿದ್ದಾರೆ.

Tags: