ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ.
ಜೂನ್ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು ಮಾತ್ರವೇ ಮಳೆ ಸುರಿದಿದೆ. ಅಂದರೆ ಒಟ್ಟಾರೆ ಮಳೆ ಕೊರತೆ ಪ್ರಮಾಣ ಶೇ.11ರಷ್ಟಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂನ್ ಮಾಹೆಯಲ್ಲಿ ಇಷ್ಟು ಕಡಿಮೆ ಮಳೆ ಆಗಿದ್ದು 5 ವರ್ಷದ ಗರಿಷ್ಠ. ಆದರೆ ಖುಷಿಯ ಸಂಗತಿ ಎಂದರೆ ದಕ್ಷಿಣ ಭಾರತದಲ್ಲಿ ಮಾತ್ರ ಶೇ.14ರಷ್ಟು ಹೆಚ್ಚಿನ ಮಳೆ ಸುರಿದಿದೆ. ಉಳಿದೆಡೆ ಮಳೆ ಕೊರತೆ ಉಂಟಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಈ ತಿಂಗಳಿನಲ್ಲಿ ಅಂದರೆ ಜುಲೈನಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಿನಲ್ಲಿ ಸುರಿಯಲಿರುವ ಭಾರೀ ಮಳೆಯಿಂದ ರಾಜ್ಯದ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿದ್ದು, ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಮಳೆ ರೈತರಿಗೆ ಭಾರೀ ಖುಷಿ ತಂದಿದ್ದು, ಹೆಚ್ಚಿನ ಬೆಳೆ ಬೆಳೆಯಲ್ಲಿ ಅನ್ನದಾತರು ಅಂದಾಜು ಹಾಕುತ್ತಿದ್ದಾರೆ.
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…
ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…