Mysore
27
scattered clouds

Social Media

ಮಂಗಳವಾರ, 16 ಜೂನ್ 2026
Light
Dark

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ.

ಮಳೆ ಹೊಡೆತಕ್ಕೆ 53 ಜನರಿಗೆ ಗಾಯಗಳಾಗಿವೆ. 98 ಮನೆಗಳು ಹಾನಿಗೊಂಡಿವೆ. 130 ಜಾನುವಾರುಗಳು ಸಾವನ್ನಪ್ಪಿವೆ. ರಾಜ್ಯಾದ್ಯಂತ ಹಲವಾರು ಮನೆಗಳು ಹಾನಿಗೊಳಗಾಗಿವೆ.

ಸಿಎಂ ಯೋಗಿ ಆದಿತ್ಯನಾಥ್‌ ಅವರು ಸಾವಿಗೆ ಸಂತಾಪ ಸೂಚಿಸಿದ್ದು, 24 ಗಂಟೆಗಳ ಒಳಗೆ ಆರ್ಥಿಕ ನೆರವು ನೀಡುವಂತೆ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಬೃಹತ್‌ ಗಾತ್ರದ ಮರಗಳು ಧರಶಾಹಿಯಾಗಿವೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!