ಉತ್ತರಾಖಂಡ್: ಕಳೆದ ಕೆಲ ದಿನಗಳಿಂದ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಈ ಘಟನೆ ನಡೆದಿದ್ದು, ಭಾರೀ ಮಳೆ ಹಾಗೂ ಪ್ರವಾಹಕ್ಕೆ ಹಲವು ಪ್ರದೇಶಗಳು ಹಾನಿಯಾಗಿವೆ. ರಾಜ್ಯದಲ್ಲಿ ಗುಡುಗು,ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ.
ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಜನತೆ ಭಯಭೀತರಾಗಿದ್ದಾರೆ. ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.





