amaranath
ಶ್ರೀನಗರ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಹಲ್ಗಾಮ್, ಬಲ್ತಾಲ್ ಮಾರ್ಗಗಳ ಮೂಲಕ ಸಾಗುವ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಜಮ್ಮು-ಕಾಶ್ಮೀರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದ್ದಾರೆ.
ಇನ್ನು ಈವರೆಗೆ ಪವಿತ್ರ ಅಮರನಾಥ ಗುಹಾ ದೇವಾಲಯಕ್ಕೆ 3.93 ಲಕ್ಷಕ್ಕೂ ಅಧಿಕ ಯಾತ್ರಿಕರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಗುರುವಾರ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರೀ ಮಳೆಯಿಂದಾಗಿ ಮೂಲ ಶಿಬಿರಗಳಿಂದ ಯಾತ್ರಾರ್ಥಿಗಳ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಜುಲೈ.31ರವರೆಗೆ ಭಗವತಿ ನಗರದಿಂದ ಜಮ್ಮುವಿನಿಂದ ಬಾಲ್ಟಾಲ್ ಮತ್ತು ನುನ್ವಾನ್‌ನ ಮೂಲ ಶಿಬಿರಗಳ ಕಡೆಗೆ ಯಾವುದೇ ಬೆಂಗಾವಲು ಸಂಚಾರವನ್ನು ಅನುಮತಿಸುವುದಿಲ್ಲ ಎಂದು ಡಿಐಪಿಆರ್ ತಿಳಿಸಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…