ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಕ್ಟೋಬರ್.22ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಭಾರೀ ಮಳೆಯ ಪರಿಣಾಮ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಧಾರಾಕಾರ ಮಳೆಯಿಂದ ಹಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಜನತೆ ಆತಂಕದಲ್ಲಿದ್ದಾರೆ.





