ದೇಶ- ವಿದೇಶ

ಕೇರಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್‌, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್.‌22ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಭಾರೀ ಮಳೆಯ ಪರಿಣಾಮ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಧಾರಾಕಾರ ಮಳೆಯಿಂದ ಹಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಜನತೆ ಆತಂಕದಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

57 mins ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

2 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

2 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

2 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

3 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

3 hours ago