ಉತ್ತರಾಖಂಡ್: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ನಿನ್ನೆ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ ಐವರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನ ರಕ್ಷಣಾ ತಂಡಗಳಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.
ಇನ್ನು ಉತ್ತರಾಖಂಡ್‌ನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಮಳೆ ಸಂಪೂರ್ಣ ಕಡಿಮೆಯಾದರಷ್ಟೇ ಕೇದಾರನಾಥ ಯಾತ್ರೆಯನ್ನು ಪುನರ್ ಆರಂಭಿಸುವುದಾಗಿ ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಧರಾಲಿ ಗ್ರಾಮದಲ್ಲಿ ಇದುವರೆಗೂ 130ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ತಕ್ಷಣದ ಆಹಾರ, ಆಶ್ರಯ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಸೂಚನೆಗಳನ್ನು ನೀಡಲಾಗಿದೆ ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ಮಾಹಿತಿ ನೀಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…