ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾರೀ ಹಿಮಪಾತದಿಂದ ಜನರು ಮನೆಯಿಂದ ಹೊರಬರದ ಸ್ಥಿತಿ ನಿರ್ಮಾಣವಾಗಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿಗೆ ಪರದಾಡುವಂತಾಗಿದೆ.

ಬುಡ್ಗಮ್‌, ಬಾರಾಮುಲ್ಲಾ ಮತ್ತು ಪುಲ್ವಾಮಾದಲ್ಲಿ ಅಧಿಕ ಹಿಮಪಾತವಾಗುತ್ತಿದ್ದು, ಇದು ಮೂಲಸೌಕರ್ಯಕ್ಕೆ ಹಾನಿಮಾಡುವ ಸಾಧ್ಯತೆ ಎದುರಾಗಿದೆ.

ಗಾಳಿಯ ಪ್ರಭಾವ ಹೆಚ್ಚಾಗಿರುವುದರಿಂದ ಶ್ರೀನಗರ ಮತ್ತು ಪುಲ್ವಾಮಾದಲ್ಲಿ ಬಲವಾದ ಗಾಳಿಗೆ ಛಾವಣಿಗಳು ಮತ್ತು ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ಅನೇಕ ಮನೆಗಳು ಕೂಡ ಹಾನಿಯಾಗಿದ್ದು, ಜನತೆ ಆತಂಕಕ್ಕೀಡಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

7 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

18 mins ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

55 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

2 hours ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

4 hours ago