ಶ್ರೀನಗರ: ಕಣಿವೆ ನಾಡು ಕಾಶ್ಮೀರದಲ್ಲಿ ಭಾರೀ ಹಿಮಪಾತ ಆಗುತ್ತಿದ್ದು, ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರದಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಸಂಪೂರ್ಣವಾಗಿ ಬಿಳಿ ಬಣ್ಣದಿಂದ ಆವರಿಸಿದೆ.
ಹಿಮಪಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರವಾಸಿಗರ ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ನಿರಂತರ ಹಿಮಪಾತ ಮತ್ತು ಅತ್ಯಂತ ಕಡಿಮೆ ಗೋಚರತೆಯಿಂದಾಗಿ ಶೇಖ್ ಉಲ್ ಆಲಂ ವಿಮಾನ ನಿಲ್ದಾಣಕ್ಕೆ ಬರುವ ಹಾಗೂ ಅಲ್ಲಿಂದ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಸಿಎಂ ಓಮರ್ ಅಬ್ದುಲ್ಲಾ ಅವರು ಗಂದರ್‌ಬಾಲ್ ಜಿಲ್ಲೆಗೆ ಭೇಟಿ ನೀಡಿ ಆರೋಗ್ಯ ಮತ್ತು ಇತರೆ ಅತ್ಯ ಸೇವೆಗಳನ್ನು ಒದಗಿಸುವ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ.





