Mysore
24
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಜಮ್ಮು-ಕಾಶ್ಮೀರದಲ್ಲಿ ಭೀಕರ ಹಿಮಪಾತ

tourist spots Jammu and Kashmir

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ.

ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರೆ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ, ಸಿಆರ್‌ಪಿಎಫ್‌, ಲಡಾಖ್‌ ಪೊಲೀಸ್‌ ಸೇರಿದಂತೆ ಸ್ಥಳೀಯ ಆಡಳಿತವು ಹಿಮ ತೆರವು ಕಾರ್ಯಾಚರಣೆಯಲ್ಲಿ ತೊಡಗಿದೆ.

ಭಾರೀ ಹಿಮಪಾತ ಸಂಭವಿಸಿರುವುದರಿಂದ ಝೋಜಿಲಾ ಪಾಸ್‌ ಮೂಲಕ ಕಾಶ್ಮೀರ ಮತ್ತು ಲಡಾಖ್‌ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್‌ ಆಗಿದೆ.

 

Tags:
error: Content is protected !!