ಕಠ್ಮಂಡು: ನೇಪಾಳದಲ್ಲಿ ಭಾರೀ ಹಿಮಪಾತದಿಂದಾಗಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಡೋಲ್ಪಾ ಜಿಲ್ಲೆಯ ಶೇ–ಫೋಕ್ಸುಂಡೋ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಧೋ ಪ್ರದೇಶಕ್ಕೆ ತೆರಳಿದ್ದ ಪ್ರವಾಸಿಗರು, ಭಾರೀ ಹಿಮಪಾತದಿಂದಾಗಿ ಅಲ್ಲಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದಾರೆ.
ಪ್ರವಾಸಿಗರು ಇರುವ ಸ್ಥಳವನ್ನು ಈಗಾಗಲೇ ಪತ್ತೆಹಚ್ಚಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸೇನೆಯ ಹೆಲಿಕಾಪ್ಟರ್ ನೆರವು ಪಡೆಯಲಾಗುತ್ತಿದೆ ಎಂದು ಡೋಲ್ಪಾ ಜಿಲ್ಲೆಯ ಮುಖ್ಯ ಜಿಲ್ಲಾ ಅಧಿಕಾರಿ ಜುನೂ ಧಕಾಲ್ ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಭದ್ರತಾ ಸಿಬ್ಬಂದಿ ಹಾಗೂ ನೇಪಾಳಿ ಮಾರ್ಗದರ್ಶಿ ನೀಡಿದ್ದ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಪ್ರವಾಸಿಗರು ಮುಂದೆ ಸಾಗಿದ್ದರು ಎನ್ನಲಾಗಿದೆ. ಭಾರೀ ಹಿಮಪಾತದ ನಡುವೆಯೂ ಮಾರ್ಗದರ್ಶಿಯನ್ನು ಬಿಟ್ಟು ಶೇ–ಫೋಕ್ಸುಂಡೋ ಸರೋವರದ ಕಡೆಗೆ ತೆರಳಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆರು ಮಂದಿಯನ್ನೂ ಸುರಕ್ಷಿತವಾಗಿ ಕರೆತರಲು ಪ್ರಯತ್ನ ನಡೆಯುತ್ತಿದೆ ಎಂ ಮಾಹಿತಿ ಲಭ್ಯವಾಗಿದೆ.
ವಿಶಾಖಪಟ್ಟಣ: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾದಲ್ಲಿ ಚಂಡಮಾರುತದ ಆತಂಕ ಎದುರಾಗಿದೆ. ನವೆಂಬರ್ 3ರ ಮುಂಜಾನೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ…
ಬೆಂಗಳೂರು: ತಮ್ಮ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ಇಡಿ ಮತ್ತು ಐಟಿ ದಾಳಿ ನಡೆಸಲು ಕೇಂದ್ರ ಸಚಿವರೊಬ್ಬರು ಒತ್ತಡ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ…
ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ.…
ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ ತೆರಿಗೆ ಪಾಲಿನ ಕಂತನ್ನು ಬಿಡುಗಡೆ ಮಾಡಿದ್ದು, ಕರ್ನಾಟಕಕ್ಕೆ 4,504 ಕೋಟಿ ರೂಪಾಯಿ ಹಂಚಿಕೆಯಾಗಿದೆ…