Mysore
22
scattered clouds

Social Media

ಶುಕ್ರವಾರ, 11 ಜುಲೈ 2025
Light
Dark

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್‌ ಪತನ: 6 ಮಂದಿ ಸಜೀವ ದಹನ

ಡೆಹ್ರಾಡೂನ್:‌ ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಗೊಂಡಿದ್ದು, ಪೈಲೆಟ್‌, ಮಗು ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ.

ಉತ್ತರಾಖಂಡದ ಗೌರಿಕುಂಡ ಬಳಿ ಈ ಘಟನೆ ನಡೆದಿದ್ದು, ಹವಾಮಾನ ವೈಪರೀತ್ಯದಿಂದ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ರುದ್ರಪ್ರಯಾಗ್‌ ಜಿಲ್ಲೆಯಲ್ಲಿ ಬೆಳಿಗಿನ ಜಾವ 5.20ರ ಸುಮಾರಿಗೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್‌ ಹೊತ್ತಿ ಉರಿದಿದೆ.

ಹೆಲಿಕಾಪ್ಟರ್‌ ದುರಂತದ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಎಕ್ಸ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆ ನೋವು ತರಿಸಿದೆ. ಸ್ಥಳೀಯ ರಕ್ಷಣಾ ತಂಡಗಳು, ಸ್ಥಳೀಯ ಆಡಳಿತಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!