ಡೆಹ್ರಾಡೂನ್: ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲೆಟ್, ಮಗು ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ.
ಉತ್ತರಾಖಂಡದ ಗೌರಿಕುಂಡ ಬಳಿ ಈ ಘಟನೆ ನಡೆದಿದ್ದು, ಹವಾಮಾನ ವೈಪರೀತ್ಯದಿಂದ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ರುದ್ರಪ್ರಯಾಗ್ ಜಿಲ್ಲೆಯಲ್ಲಿ ಬೆಳಿಗಿನ ಜಾವ 5.20ರ ಸುಮಾರಿಗೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್ ಹೊತ್ತಿ ಉರಿದಿದೆ.
ಹೆಲಿಕಾಪ್ಟರ್ ದುರಂತದ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಎಕ್ಸ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆ ನೋವು ತರಿಸಿದೆ. ಸ್ಥಳೀಯ ರಕ್ಷಣಾ ತಂಡಗಳು, ಸ್ಥಳೀಯ ಆಡಳಿತಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಬರೆದುಕೊಂಡಿದ್ದಾರೆ.
ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…
ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…