ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ(ಮೇ.19) ಪತನಗೊಂಡಿದೆ. ಇಬ್ರಾಹಿಂ ರೈಸಿ ಸೇರಿದಂತೆ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮೃತಪಟ್ಟಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ರಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಅಜೆರ್ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಪತನಗೊಂಡಿದೆ. ಈ ಅಪಘಾತಕ್ಕೂ ಮುನ್ನ ಹೆಲಿಕಾಪ್ಟರ್ ನಿಯಂತ್ರಣ ಘಟಕದ ಸಂಪರ್ಕ ಕಡಿದುಕೊಂಡು ವೇಗವಾಗಿ ಭೂಸ್ಪರ್ಶ ಮಾಡಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.
ಹೆಲಿಕಾಪ್ಟರ್ ಪತನಗೊಂಡ ಪ್ರದೇಶಗಳಲ್ಲಿ ದಟ್ಟನೆಯ ಮಂಜು ಮಸುಕಿದ್ದು, ಶೋಧ ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾವೆ.
ಅಣೆಕಟ್ಟು ಉದ್ಘಾಟನೆಗೆ ಆಗಮಿಸಿದ್ದ ರೈಸಿ:
ಅಜೆರ್‌ಬೈಜ್‌ನಲ್ಲಿ ಅರಾಸ್ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟು ಉದ್ಘಾಟನೆಗಾಗಿ ರೈಸಿ ಬಂದಿದ್ದರು. ಈ ಕಾರ್ಯಕ್ರಮದಲ್ಲಿ ಅಜೆರ್‌ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಸಹ ಇದ್ದರು. ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಜೊತೆಗೆ ಬೆಂಗಾವಲಿನ ಎರಡು ಹೆಲಿಕಾಪ್ಟರ್ ಹಾರಾಟ ನಡೆಸಿದ್ದವು. ಅವು ಸುರಕ್ಷಿತವಾಗಿ ನಿಗದಿತ ಸ್ಥಳ ತಲುಪಿವೆ ಎನ್ನಲಾಗಿದೆ.
ಡ್ರೋನ್ ಮೂಲಕ ಕಾರ್ಯಾಚರಣೆ:
ಪತನಗೊಂಡ ಹೆಲಿಕಾಪ್ಟರ್‌ನ್ನು ಟರ್ಕಿಯ ಡ್ರೋನ್ ಪತ್ತೆ ಮಾಡಿದ್ದು, ಇರಾನ್ ರಕ್ಷಣಾ ಕಾರ್ಯಾಚರಣೆಯ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್ ಪತನದ ಪ್ರದೇಶದಲ್ಲಿ ದಟ್ಟ ಮಂಜು ಆವರಿಸಿದ್ದು, ಶಾಖವಿರುವ ಪ್ರದೇಶವನ್ನು ಡ್ರೋನ್ ಮತ್ತೆ ಹಚ್ಚಿದೆ. ಅದುವೇ ಹೆಲಿಕಾಪ್ಟರ್ ಪತನದ ಜಾಗವಿರಬಹುದು ಎಂದು ನಂಬಲಾಗಿದೆ.
ಹೆಲಿಕಾಪ್ಟರ್ ಪತ್ತೆಗೆ ಟರ್ಕಿಯ ನೈಟ್ ವಿಷನ್ ಹೆಲಿಕಾಪ್ಟರ್‌ಗಳನ್ನು ಕಳುಹಿಸಲು ಇರಾನ್ ಮನವಿ ಮಾಡಿತ್ತು. ಅದರಂತೆ 6 ನೈಟ್ ವಿಷನ್ ಮತ್ತು ಶೋಧ ಕಾರ್ಯಾಚರಣೆಯ ಹೆಲಿಕಾಪ್ಟರ್‌ಗಳು ಮತ್ತು 32 ಮಂದಿ ಪರ್ವತಾರೋಹಿಗಳನ್ನು ಕಳುಹಿಸಲಾಗಿದೆ ಎಂದು ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಸಚಿವಾಲಯ ತಿಳಿಸಿದೆ.
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…